ಬಳ್ಳಾರಿ :ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ. ಮಾಹಿತಿಗೆ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ