ನ.13 ರಂದು ಪಿಂಚಣಿ ಅದಾಲತ್

Published on

ಬಳ್ಳಾರಿ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇಲಾಖೆ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಪತ್ರ ಅಥವಾ ಇ-ಮೇಲ್ ಮೂಲಕ ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ನ.11 ರೊಳಗಾಗಿ ತಿಳಿಸಬಹುದು. ಮಾಹಿತಿಗೆ ದೂ.08392-268943 ಗೆ ಸಂಪರ್ಕಿಸಬಹುದು.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net