ಬಳ್ಳಾರಿ :ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್ -25 ರ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಏ.24 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ನಗರದ ಆರ್.ಕೆ ಮಿಲ್ ರಸ್ತೆ, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ನಿಲ್ದಾಣ, ಮಾರ್ಕೆಟ್ ಟೋಪಿಗಲ್ಲಿ, ಮರಿಸ್ವಾಮಿ ಮಠ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.