ಬಳ್ಳಾರಿ : ನಗರ ಜೆಸ್ಕಾಂ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ನ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್‌ಪಿ ಸರ್ಕಲ್, ಶಾಸ್ತ್ರಿನಗರ, ಬ್ಯಾಂಕ್ ಕಾಲನಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.