ಗರ್ಭಿಯರು ನಿರ್ಲಕ್ಷೃ ವಹಿಸದಿರಿ

Published on

ಬಳ್ಳಾರಿ : ಗರ್ಭಿಣಿಯರಲ್ಲಿ ಪಾದಗಳ ಬಾವು ಅಪಾಯಕಾರಿ, ನಿರ್ಲಕ್ಷೃ ವಹಿಸದೆ ತಪಾಸಣೆಗೆ ಒಳಗಾಗಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.

ತಾಲೂಕಿನ ಕೊಳಗಲ್ ಗ್ರಾಮದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳಿಗೆ ಲಸಿಕೆ ಹಾಕಿಸಲು ಆಗಮಿಸಿದ ತಾಯಂದಿರು ಹಾಗೂ ಟಿಡಿ ಚುಚ್ಚುಮದ್ದು ಪಡೆಯಲು ಆಗಮಿಸಿದ ಗರ್ಭಿಣಿಯರೊಂದಿಗೆ ಆರೋಗ್ಯ ವಿಚಾರಿಸಿ ಮಾತನಾಡಿದರು. ಮೊದಲ ಹೆರಿಗೆ ಶಸ್ತಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ-ಟಿ, ನೀರೊಧ ಕುರಿತು ಆರೋಗ್ಯ ಶಿಕ್ಷಣ ನೀಡಲು ಮರೆಯಬಾರದು. ಅತಿ ಮುಖ್ಯವಾಗಿ ಗರ್ಭಿಣಿಗೆ ಮೇಲ್ಮಟ್ಟದ ಆಸ್ಪತ್ರೆಗೆ ರೇಫರ್ ಮಾಡುವಾಗ 108 ಆರೋಗ್ಯ ಕವಚ ಬರುವ ಸಮಯ ತಡವಾಗುವ ಸಾಧ್ಯತೆ ಇದ್ದಲ್ಲಿ ತಕ್ಷಣೇ ವೈದ್ಯಾಧಿಕಾರಿಗಳು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net