ಬಳ್ಳಾರಿ : ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸುವ ಮೂಲಕ ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ. ಮರಿಯಂಬಿ ಹೇಳಿದರು.
ನಗರದ ಎಸ್‌ಎಸ್‌ಎ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ನಡೆದ ಆಯೋಡಿನ್‌ಯುಕ್ತ ಉಪ್ಪಿನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಥೈರಾಯಿಡ್ ಗ್ರಂಥಿಯು ದೇಹಕ್ಕೆ ಅವಶ್ಯಕವಿರುವ ಹಾರ್ಮೋನ್‌ಗಳನ್ನು ಉತ್ಪತ್ತಿ ಮಾಡಲು ಅಯೋಡಿನ್ ಅಂಶ ಅಗತ್ಯವಾಗಿದೆ. ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸಬೇಕು. ದಿನ ನಿತ್ಯ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ಬಳಸಬೇಕು. ತಾಜಾ ತರಕಾರಿಯೊಂದಿಗೆ ಅಯೋಡಿನ್‌ಯುಕ್ತ ಉಪ್ಪು ಬಳಕೆ ಮಾಡಬೇಕು. ಇದರಿಂದ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.