ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಕ್ರೋಶ

18082022 babu
Published on

ಬಳ್ಳಾರಿ: ಮಹಿಳೆಯರಿಗೆ ಸರ್ಕಾರಿ ಕೆಲಸ ನೇಮಕಾತಿ ಆಗಬೇಕಾದರೆ, ಮಂಚಕ್ಕೆ ಏರಬೇಕು ಎಂದು ಅವಾಚ್ಯ ಶಬ್ದ ಹೇಳಿಕೆ ನೀಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಹಾಗೂ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಬಿಜೆಪಿ ಮಹಿಳಾ ಘಟಕದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷೆ ಕೆ.ಸುಗುಣಾ ಮಾತನಾಡಿ, ಮಹಿಳೆಯರಿಗೆ ಸರ್ಕಾರಿ ಕೆಲಸ ದೊರೆಯಬೇಕಾದರೆ ಮಂಚಕ್ಕೆ ಏರಬೇಕು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನಿಜಕ್ಕೂ ಖಂಡನೀಯ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.
ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನ ಅಲಂಕರಿಸಿದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಮಹಿಳೆಯ ಬಗ್ಗೆ ಎಷ್ಟು ಗೌರವ ಇಟ್ಟುಕೊಂಡಿದ್ದಾರೆ ಎಂಬುದು ಸಾಬೀತಾಗಿದೆ. ಇಂತಹ ಕೀಳು ಮಟ್ಟದ ಪದ ಬಳಕೆ ಮಾಡಿರುವುದು ಅಕ್ಷಮ್ಯ ಅಪರಾಧ, ಮಹಿಳೆಯರಿಗೆ ಅವಮಾನ ಮಾಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net