ಮಕ್ಕಳ ರಕ್ಷಣೆ ಎಲ್ಲರ ಹೊಣೆ

Published on

ಬಳ್ಳಾರಿ : ಮಕ್ಕಳ ರಕ್ಷಣೆ ಮತ್ತು ಪೋಷಣೆ ನಮ್ಮೆಲರ ಹೊಣೆಯಾಗಿದೆ ಎಂದು ಸಿಪಿಐ ಕಾಳಿಂಗ ಹೇಳಿದರು.

ತಾಲೂಕಿನ ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಫ್ರೌಡ ಶಾಲೆಯ ಮಕ್ಕಳಿಗೆ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನುಗಳ

ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಬಾಲ್ಯವಿವಾಹ, ಬಾಲಕಾರ್ಮಿಕ, ಭಿಕ್ಷಾಟನೆ, ಲೈಂಗಿಕ ಕಿರುಕುಳದಿಂದ ಮತ್ತು ಇನ್ನಿತರೆ ಸಂಕಷ್ಟಕ್ಕೆ ಒಳಗಾದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅಂತಹ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು.

ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಮಾತನಾಡಿ, ಪೋಕ್ಸೋ ಕಾಯ್ದೆ ಹಾಗೂ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶ ಕುರಿತು ತಿಳಿಸಿದರು. ಭೇಟಿ ಬಚವೋ, ಭೇಟಿ ಪಡವೋ” ಅಭಿಯಾನದ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಮತ್ತು ಸಬಲೀಕರಣ ಕುರಿತು ವಿವರಿಸಿದರು.

ಇದೇ ವೇಳೆ ಎಲ್ಲ ಮಕ್ಕಳಿಗೆ ಹೆಣ್ಣು ಮಕ್ಕಳ ರಕ್ಷಣೆ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net