ಬಳ್ಳಾರಿ : ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 23 ರವರೆಗೆ ಮೂರು ಹಂತಗಳಲ್ಲಿ ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಟುಂಬದ ಜಾತಿ, ಉಪಜಾತಿ ಮತ್ತು ಇತರೆ ಮಾಹಿತಿಗಳನ್ನು ನಿಖರವಾಗಿ ಗಣತಿದಾರರಿಗೆ ನೀಡಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ಆರಂಭ: ಸಮೀಕ್ಷೆ ಕುರಿತ ಮಾಹಿತಿ ಪಡೆಯಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 8277888866 / 08392277100 ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಕ್ಷೇತ್ರವಾರು ನೋಡೆಲ್ ಅಧಿಕಾರಿಗಳ ನೇಮಕ: ಬಳ್ಳಾರಿ ನಗರ: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ (ಮೊ.9686409096), ಬಳ್ಳಾರಿ ಗ್ರಾಮೀಣ: ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ (ಮೊ.8277930401). ಕಂಪ್ಲಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾನುಮತಿ (ಮೊ.9986609038).
ಸಿರಗುಪ್ಪ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ.ಎ.ಕೆ (ಮೊ.8971177872). ಸಂಡೂರು: ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ (ಮೊ.9448999248) ನೇಮಿಸಲಾಗಿದೆ.
=====