ಗಾಬರಿಗೊಳಿಸದೆ ಚಿಕಿತ್ಸೆ ಒದಗಿಸಿ

Published on

ಬಳ್ಳಾರಿ : ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಹೋಗಿ ಚಿಕಿತ್ಸೆ ಒದಗಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ ಹೇಳಿದರು.

ತಾಲೂಕಿನ ಶಿಡಿಗಿನಮೊಳ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಸಹಯೋಗದೊಂದಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಹಾವು ಕಡಿತ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು.

ವೈದ್ಯಾಧಿಕಾರಿ ಡಾ.ಸಂತೋಷ್ ಹೆಬ್ಬಾಳ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬೇಡಿ ಎಂದು ಹೇಳಿದರು.

ಇದೇ ವೇಳೆ ನಾಯಿ ಕಡಿತ, ಬೇಸಿಗೆ ಹಿನ್ನಲೆಯಲ್ಲಿ ಶುದ್ದ ನೀರಿನ ಮಹತ್ವ ಕುರಿತು ಅರಿವು ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net