ಡೆಂೆ ನಿಯಂತ್ರಣಕ್ಕೆ ಸಾರ್ವಜನಿಕರು ಕೈ ಜೋಡಿಸಿ

Published on

ಬಳ್ಳಾರಿ : ಡೆಂೆ ರೋಗ ನಿಯಂತ್ರಿಸಲು ಆರೋಗ್ಯ ಇಲಾಖೆಯು ಕೈಗೊಳ್ಳುವ ಚಟುವಟಿಕೆಗಳಿಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು.

ಇಲ್ಲಿನ ಗಾಂಧಿನಗರ ಬಡಾವಣೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗದ ಮೂಲಕ ಜಿಲ್ಲಾದ್ಯಂತ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳ (ಸೂಪರ್ ಶುಕ್ರವಾರ) ನಿರ್ಮೂಲನಾ ದಿನ ಅಂಗವಾಗಿ ಈಡೀಸ್ ಲಾರ್ವಾ ಸಮೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡೆಂೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ತಂಡ ಮನೆ ಮನೆಗೆ ಭೇಟಿ ನೀಡಿ ಡೆಂೆ ಹರಡುವ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಮಾಡುವ ಕಾರ್ಯವನ್ನು ಸಾರ್ವಜನಿಕರಿಗೆ ಮನವೊಲಿಸಿ ಯಶಸ್ವಿಯಾಗಿ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹ ಬಳಕೆಗಾಗಿ ನೀರು ತುಂಬುವ ಈ ಎಲ್ಲ ಪರಿಕರಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಬೇಕು. ನೀರು ತುಂಬಿದ ನಂತರ ಸರಿಯಾಗಿ ಮುಚ್ಚಳ ಮುಚ್ಚಿ, ಹಾಗೂ ಅನಗತ್ಯವಾಗಿ ನೀರು ನಿಲ್ಲುವ ಪರಿಕರಗಳನ್ನು ವಾರಕ್ಕೊಮ್ಮೆ ಪರೀಕ್ಷಿಸಿ ಸೊಳ್ಳೆ ಮರಿ ಉಂಟಾಗದಂತೆ ತಡೆಯುವ ಮೂಲಕ ಸಮುದಾಯದ ಆರೋಗ್ಯ ಕಾಪಾಡುವ ಇಲಾಖೆಯ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಡಿಎಚ್‌ಒ ಡಾ.ವೈ. ರಮೇಶಬಾಬು ಮಾತನಾಡಿ, ಇತ್ತೀಚೆಗೆ ರಾಜ್ಯ ಸರ್ಕಾರವು ಡೆಂೆ ಜ್ವರವನ್ನು ಸಾಂಕ್ರಾಮಿಕ ಕಾಯ್ದೆಗೆ ಒಳಪಡಿಸಿದ್ದು, ಈಡೀಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿ ತಾಣಗಳನ್ನು ನಿರ್ಲಕ್ಷೃ ವಹಿಸಿದರೆ 200 ಗಳಿಂದ 2000 ರೂ. ಗಳ ವರೆಗೆ ದಂಡ ವಿಧಿಸುವ ಕಾನೂನು ಅನುಷ್ಠಾನ ಮಾಡಿದ್ದು, ಪ್ರತಿಯೊಬ್ಬರ ಸಹಭಾಗಿತ್ವದೊಂದಿಗೆ ಸೊಳ್ಳೆಗಳ ನಿಯಂತ್ರಣ ಅವಶ್ಯಕತೆಯಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net