ಬಳ್ಳಾರಿ : ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಹೇಳಿದರು.
ನಗರದ ಗಾಲೀಬ್ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಡ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿಬೇಕಿದೆ. ಬಾಲ್ಯವಿವಾಹಕ್ಕೆ ಕಾರಣರಾದ ಪುರೋಹಿತರು, ಮೌಲಿಗಳು, ಚರ್ಚ್ ಪಾದ್ರಿಗಳು ಮತ್ತು ದೇವಸ್ಥಾನದ ಪೂಜಾರಿಗಳು, ಲಗ್ನ ಪತ್ರಿಕೆ ಮುದ್ರಣ ಮಾಡುವ ಪ್ರಿಟಿಂಗ್ ಪ್ರೆಸ್, ವಾದ್ಯವೃಂದದವರು, ಶಾಮಿಯಾನ, ಪೋಟೋಗ್ರಾಫರ್-ವಿಡಿಯೋಗ್ರಾಫರ್ ಸೇರಿದಂತೆ ಭಾಗಿಯಾದ ಇನ್ನಿತರೆ ವ್ಯಕ್ತಿಗಳ ಮೇಲೆ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಿಆರ್‌ಪಿ ಶಾಹನವಾಜ್ ಮಾತನಾಡಿ, ಎಲ್ಲ ಮಕ್ಕಳು ಬಾಲ್ಯವಿವಾಹ ತಡೆಗೆ ಮುಂದಾಗಬೇಕು. ಪೋಷಕರಿಗೆ ಈ ಕುರಿತು ಅರಿವು ಮೂಡಿಸಬೇಕು. ಯಾವುದೇ ಭಯಪಡದೇ ಮಕ್ಕಳ ಸಹಾಯವಾಣಿ ಸಂಖ್ಯೆ ಅಥವಾ ಪೊಲೀಸ್ ಸೇವೆಗೆ ಮಾಹಿತಿ ನೀಡುವ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಬೇಕು ಎಂದು ಕರೆ ನೀಡಿದರು.