ಬಳ್ಳಾರಿ, ರಾಣಿ ಚನ್ನಮ್ಮ ಸ್ಪೂರ್ತಿಧಾಯಕ ಮಹಿಳೆ

23 YERRISWAMY 05
Published on

ಬಳ್ಳಾರಿ : ಕಿತ್ತೂರು ರಾಣಿ ಚನ್ನಮ್ಮ ಅವರು ಸ್ಪೂರ್ತಿಧಾಯಕ ಮಹಿಳೆಯಾಗಿದ್ದು, ಅನೇಕ ವೀರ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.

ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ಸ್ವಾತಂತ್ರೃ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚನ್ನಮ್ಮ ಅವರು ತಮ್ಮ ಏಳನೇ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವರಸೆ, ಕತ್ತಿ ವರಸೆಯಲ್ಲಿ ನಿಪುಣೆ ಹೊಂದಿದ್ದವರು. ಚಿಕ್ಕಂದಿನಿಅದಲೇ ವೀರತ್ವವನ್ನು ಮೈಗೂಡಿಸಿಕೊಂಡಿದ್ದವರು. ಅವರ ಧೈರ್ಯ, ಶೌರ್ಯವೂ ವಿಶ್ವಕ್ಕೆ ಮಾದರಿಯಾಗಿದೆ. ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸೋಣ ಎಂದು ಕರೆ ನೀಡಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ ಸಿದ್ಧಲಿಂಗಪ್ಪ ಮಾತನಾಡಿ, ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು. ಅವರ ದೇಶಪ್ರೇಮ ಆತ್ಮವಿಶ್ವಾಸ ಕುರಿತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕು ಎಂದರು.

ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯು ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಎಚ್.ಆರ್. ಗವಿಯಪ್ಪ ವೃತ್ತದಿಂದ ಆರಂಭಗೊಂಡು ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರವರೆಗೆ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net