ಬಳ್ಳಾರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಡಿ.14 ರಂದು ಇಲ್ಲಿನ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ತಿಳಿಸಿದ್ದಾರೆ.
ರಾಷ್ಟ್ರೀಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ. ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಸಂಪರ್ಕಿಸಬಹುದು.
--------