ನೇಮಕಾತಿ ವಿಳಂಬ ಖಂಡನೀಯ

Published on

ಬಳ್ಳಾರಿ : ಹೈಕೋರ್ಟ್ ಏಕ ಹಾಗೂ ದ್ವಿಸದಸ್ಯ ಪೀಠವು ಯುಜಿಸಿ ಮಾನದಂಡದಂತೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಗೆ ಮಧ್ಯಂತರ ಆದೇಶ ನೀಡಿದರೂ ಕೂಡ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಟಿ.ದುರುಗಪ್ಪ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೋರ್ಟ್ ತೀರ್ಪು ಪ್ರಕಟಗೊಂಡು ಹದಿಮೂರು ದಿನಗಳು ಕಳೆದರೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಯಾವುದೇ ತೀರ್ಮಾನ ಕೈಗೊಳ್ಳದೆ ಮೌನ ವಹಿಸಿದ್ದಾರೆ. ಆದ್ದರಿಂದ, ಸಮಾಜದಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತರ ಹಿತ ಕಾಪಾಡುವ ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಸಿಎಂ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಸಿದರು. ರಾಜ್ಯ ಸರ್ಕಾರದ ಇಂತಹ ವಿಳಂಬ ನೀತಿ, ನಿರ್ಲಕ್ಷೃ ಧೋರಣೆಗೆ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಅನುಭವಿಸುತ್ತಾ ನಲುಗಿ ಹೋಗಿದ್ದಾರೆ. ಎರಡು ತಿಂಗಳಿಂದ ವೇತನವಿಲ್ಲದೆ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ಹೇಳಿದರು. ಅತಿಥಿ ಉಪನ್ಯಾಸಕರಾದ ಡಾ.ಕೆ.ಬಸಪ್ಪ, ರುದ್ರಮುನಿ, ಗೋವಿಂದ, ಎ.ಕೆ.ಮಾರಪ್ಪ, ಎಂ.ರಫೀ, ಎಸ್.ಎಂ.ರಮೇಶ್, ಗುರುರಾಜ್, ಡಾ.ಗಂಗಾಧರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net