ಜವಾಬ್ದಾರಿ ಬಗ್ಗೆ ಭಿನ್ನಾಭಿಪ್ರಾಯಗಳಿಲ್ಲ, ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ

B Sriramulu Ballari
Published on

ಬಳ್ಳಾರಿ: ಕರೊನಾ ನಿಯಂತ್ರಣ ಸಂಬಂಧಿಸಿ ಸಿಎಂ ವಹಿಸಿರುವ ಜವಾಬ್ದಾರಿ ಬಗ್ಗೆ ಸಚಿವರ ನಡುವೆ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಂಗಳೂರು ಹೊರತುಪಡಿಸಿ ರಾಜ್ಯದ ಗಮನಹರಿಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಬೆಂಗಳೂರು ನೋಡಿಕೊಳ್ಳುತ್ತಿದ್ದರು. ಈಗವರು ಕ್ವಾರಂಟೈನ್‌ನಲ್ಲಿ ಇರುವುದರಿಂದ ಸಚಿವ ಆರ್.ಅಶೋಕ್‌ಗೆ ಜವಾಬ್ದಾರಿ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳೂ ಧೈರ್ಯದಿಂದ ಪರೀಕ್ಷೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕರೊನಾ ಮೂರನೇ ಹಂತ ತಲುಪಿಲ್ಲ. ಮೂರನೇ ಹಂತಕ್ಕೆ ಹೋದರೆ ಇನ್ನೂ ಎಚ್ಚರಿಕೆ ಅಗತ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net