ಸವಾರರು ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ

Published on

ಬಳ್ಳಾರಿ ; ಪ್ರತಿಯೊಬ್ಬ ವಾಹನಸವಾರರು ಜೀವ ರಕ್ಷಣೆ ಹಾಗೂ ಕುಟುಂಬದ ಸುರಕ್ಷತೆ ಸಲುವಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಂಚಾರಿ ಠಾಣಾ ಸಿಪಿಐ ಆಯ್ಯನಗೌಡ ಪಾಟೀಲ್ ಹೇಳಿದರು.

ಇಲ್ಲಿನ ಇಂದಿರಾ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಾರ್ವಜನಿಕರಿಗಾಗಿ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಂಬ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಇತ್ತೀಚೆಗೆ ವಾಹನಗಳ ಸಂಚಾರ ದಟ್ಟಣೆಯಿಂದ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತವಾದ ವೇಳೆ ತಲೆಗೆ ಪೆಟ್ಟು ತಗುಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಆದ್ದರಿಂದ, ವಾಹನ ಸವಾರರು ಕಡ್ಡಾಯವಾಗಿ ಐಎಸ್‌ಐ ಮಾರ್ಕ್ ಹೊಂದಿದ ಹೆಲ್ಮೆಟ್‌ಗಳನ್ನೇ ಧರಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಿಂದ ಯಾರ ಒತ್ತಡಕ್ಕೂ ಮಣಿಯದೆ ಕಡ್ಡಾಯವಾಗಿ ದಂಡ ಪಾವತಿಸಲಾಗುವುದು ಎಂದು ಸಾರ್ವಜನಿಕರಿಗೆ ಎಚ್ಚರಿಸಿದರು.

ಬಳಿಕ ಹಲವು ವೃತ್ತಗಳಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ಚಲಾಯಿಸುವ ಮಹಿಳೆ, ಹಿರಿಯರು ಹಾಗೂ ಯುವಕರಿಗೆ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಿ ಗುಲಾಬಿ ಹೂ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net