ದೇವಸ್ಥಾನಕ್ಕೆ ತೆರಳುತ್ತಿದ್ದವರ ಎದುರಿಗೆ ಬಂದ ಜವರಾಯ: ದಂಪತಿ ದಾರುಣ ಸಾವು

Accident
Published on

ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಹೊಸಪೇಟೆಯ ಅನಂತಶಯನ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.

ಹೊಸಪೇಟೆ ನಿವಾಸಿಗಳಾದ ರಾಜು ಹಾಗೂ ಪತ್ನಿ ಶಾಂತ ಮೃತ ದುರ್ದೈವಿಗಳು. ದಂಪತಿ ಟಿವಿಎಸ್​ ಎಕ್ಸಲ್​ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿ ಕಳೆದುಕೊಂಡು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net