ಬಳ್ಳಾರಿ ಮೀನುಗಾರಿಕೆ ಕಚೇರಿಯಲ್ಲಿ ಮಹಿಳೆಯ ಬರ್ಬರ ಕೊಲೆ, ವ್ಯಕ್ತಿಯ ಆತ್ಮಹತ್ಯೆ: ಏನಿದರ ಮರ್ಮ?

Woman Death
Published on

ಸಂಡೂರು (ಬಳ್ಳಾರಿ): ಪಟ್ಟಣದ ಮೀನುಗಾರಿಕೆ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯ ಕೊಲೆಯಾಗಿದ್ದು, ಮತ್ತೊಬ್ಬ ವ್ಯಕ್ತಿ ಕಚೇರಿ ಫ್ಯಾನ್​ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೀನುಗಾರಿಕೆ ಇಲಾಖೆಯ ಕ್ಷೇತ್ರ ಪಾಲಕಿ ರೆಹಮತ್ ಬೀ (32) ಕೊಲೆಯಾದ ಮಹಿಳೆಯಾಗಿದ್ದಾರೆ. ರೆಹಮತ್ ಬೀಯನ್ನು ಅತ್ಯಂತ ಅಮಾನುಷವಾಗಿ ಕೊಲೆ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಕುಮಾರ್​ ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಮೀನುಗಾರಿಕೆ ಇಲಾಖೆಯಲ್ಲಿ ಘಟನೆ ನಡೆದಿದೆ. ಕೊಲೆ ಹಾಗೂ ಆತ್ಮಹತ್ಯೆಗೆ ಕಾರಣ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆದರೆ, ಕುಮಾರ್​, ರೆಹಮತ್​ರನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ತಾನು ನೇಣಿಗೆ ಶರಣಾಗಿದ್ದಾನೆಂದು ರೆಹಮತ್​ ಸಂಬಂಧಿಕರು ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಂಡೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net