ಗ್ಯಾರಂಟಿಗಳಿಂದ ಸ್ವಾವಲಂಬಿ ಜೀವನ

Published on

ಬಳ್ಳಾರಿ: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಬಡವರು, ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು ಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.

ಕುರುಗೋಡು ತಾಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ವರ್ಷಕ್ಕೆ 233 ಕೋಟಿ ರೂ. ಹಣ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಖರ್ಚು ಮಾಡಲಾಗುತ್ತಿದೆ. ಇದು ಸಾರ್ಥಕವಾಗಬೇಕೆಂದರೆ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಮಾಹಿತಿ ಮತ್ತು ಮಾರ್ಗದರ್ಶನ ಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ದಿಗೆ ಪೂರಕವೇ ಹೊರತು, ಮಾರಕ ಅಲ್ಲ ಎನ್ನುವುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕು. ಶೇಕಡಾ ನೂರರಷ್ಟು ಯೋಜನೆಗಳ ಜಾರಿಗೆ ಪ್ರಯತ್ನ ಮಾಡಬೇಕು. ಐದು ಇಲಾಖೆ ಅಧಿಕಾರಿಗಳು, ಸಮಿತಿ ಅಧ್ಯಕ್ಷರು ಸದಸ್ಯರಿಗೆ ಸಹಕರಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಗ್ರಾಮ, ಹೋಬಳಿ, ತಾಲೂಕು ಮಟ್ಟದಲ್ಲಿ ಮಹಿಳೆಯರ ಶಿಬಿರ ಏರ್ಪಡಿಸಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಅದಕ್ಕಾಗಿ ಅಧಿಕಾರಿಗಳು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net