ಬಳ್ಳಾರಿ ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಐದು ಜನರ ಸಾವು

23022020 Bellary Accident
Published on

ಬಳ್ಳಾರಿ: ಜಿಲ್ಲೆಯಲ್ಲಿ ಮೂರು ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಗಡಿಭಾಗಕ್ಕೆ ಹೊಂದಿಕೊಂಡಿರುವ ರಾಂಪುರ ಸಮೀಪ ಮಾರುತಿ ಸಿಯಾಜ್ ಕಾರ್ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಬಳ್ಳಾರಿ ನಗರ ನಿವಾಸಿಗಳಾದ ತನುಜಾ, ರವಿ ಮೃತರಾಗಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಟಿಪ್ಪರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಕೂಡ್ಲಿಗಿ ತಾಲೂಕಿನ ನಡುಗುರ್ತಿ ಗ್ರಾಮದ ಚನ್ನಪ್ಪ(20), ಚಂದ್ರಪ್ಪ (20) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳಮುಖಿ ಸಾವು: ಭಾನುವಾರ ಹೊಸಪೇಟೆ ಬಳಿ ಎಚ್‌ಎಲ್ ಕಾಲುವೆಯಲ್ಲಿ ಕಾರೊಂದು ಪಲ್ಟಿಯಾಗಿ ಮಂಗಳಮುಖಿ ಅನಿತಾ(35)ದಾರುಣವಾಗಿ ಮೃತಪಟ್ಟಿದ್ದು, ಖಾಸಗಿ ಕಂಪನಿಯ ಉದ್ಯೋಗಿ ಮುಖೇಶ ಪ್ರಾಣಾಪಯದಿಂದ ಪಾರಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net