ಬಳ್ಳಾರಿ : ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ ಏ.27 ರಂದು ನಡೆಯಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ತಿಳಿಸಿದ್ದಾರೆ.
ಪರೀಕ್ಷೆ ಕೇಂದ್ರದ ಹೆಸರು ಮತ್ತು ವಿವರ: ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‌ಇ) ಕೊಳಗಲ್ -9844040035, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕೊಳಗಲ್-7349008289, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳ್ಳಾರಿ ಟೌನ್-9844040035, ಸರ್ಕಾರಿ ಪ್ರೌಢ ಶಾಲೆ, ಓಪಿಜೆ ಬಳಿ ತೋರಣಗಲ್ 9480933730, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಂಪ್ಲಿ, 7353346069 ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕುರುಗೋಡು 7353346069 ಪರೀಕ್ಷೆ ನಡೆಯಲಿದೆ.
ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ದೂ.08392-200125/224, ಸಹಾಯವಾಣಿ ಕೇಂದ್ರ 24*78277799990 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------