ಬಳ್ಳಾರಿ : ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಮೇ. 02 ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂಗನಕಲ್ಲು ರಸ್ತೆಯ ಶ್ರೀಭಾರತೀತೀರ್ಥ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಡಿಸಿ ಪ್ರಶಾಂತ ಕುಮಾರ ಮಿಶ್ರಾ, ಎಸ್ಪಿ ವಿ.ಜೆ.ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಎಡಿಸಿ ಮಹಮ್ಮದ್ ಎನ್.ಜುಬೈರ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.