ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಜಿಲ್ಲಾ ಪ್ರವಾಸ

Published on

ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಡಿ.12, 13 ಮತ್ತು 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಡಿ.12 ರಂದು ಬೆಳಗ್ಗೆ 9.30 ಗಂಟೆಗೆ ಇಲ್ಲಿ ನ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಹಾಗೂ ಬಳಿಕ ಮೃತ ಬಾಣಂತಿಯರ ಮನೆಗೆ ಭೇಟಿ ನೀಡುವರು. 3.15 ಗಂಟೆಗೆ ತಾಲೂಕಿನ ಬೆಣೆಕಲ್ ಗ್ರಾಮಕ್ಕೆ ಭೇಟಿ ನೀಡುವರು. ಡಿ.13 ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಇಂದಿರಾನಗರ ಹಾಗೂ ನೂತನ ಡಿಸಿ ಸಭಾಂಗಣದಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ಪಾಲ್ಗೂಂಡು ನಂತರ ಪ್ರತಿಕಾಗೋಷ್ಠಿ ನಡೆಸುವರು. ನಂತರ ಸಂಜೆ 5 ಗಂಟೆಗೆ ಹಿಂದುಳಿದ ವರ್ಗಗಳ ಬಾಲಕಿಯರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಡಿ.14 ರಂದು ಬಳ್ಳಾರಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ರಸ್ತೆಯಲ್ಲಿರುವ ಫೋಲಾಕ್ ಜೀನ್ಸ್ ಗಾರ್ಮೆಂಟ್‌ಗೆ ಭೇಟಿ ನೀಡಿ, ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸುವರು. ಬಳಿಕ ಸಂಜೆ 5 ಗಂಟೆಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net