ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಷ್ಕರ

Published on

ಬಳ್ಳಾರಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಎರಡನೇ ಹಂತದ ಮುಷ್ಕರ ಸೋಮವಾರ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸ್ಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ ಮತ್ತು ಅಲೈರಾ ಒದಗಿಸಬೇಕು. ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ನೀಡಬೇಕು. ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಅಧಿಕಾರಿಗಳ ಕುಟುಂಬಕ್ಕೆ ಐವತ್ತು ಲಕ್ಷ ರೂ. ಪರಿಹಾರ ಹಾಗೂ ಸೇವೆಯಲ್ಲಿ ಮಾರಾಣಾಂತಿ, ದೈಹಿಕ ಹಲ್ಲೆ ನಡೆದಾಗ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ನೀಡುವಂತೆ ಮೂರು ಸಾವಿರ ರೂ. ಅಪತ್ತಿನ ಭತ್ಯೆ ನೀಡಬೇಕು. ವಂಶವೃಕ್ಷ, ಜಾತಿ ಪ್ರಮಾಣ ಹಾಗೂ ಇತರೆ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಪ್ರಕರಣ ದಾಖಲಿಸುವುದನ್ನು ತಡೆದು, ತಪ್ಪು ಮಾಹಿತಿ ನೀಡುವ ಅರ್ಜಿದಾರರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸುವ ಬಗ್ಗೆ ಇಲಾಖೆಯ ಮುಖ್ಯಸ್ಥರಿಗೆ ಸೂಕ್ಷ್ಮ ಆದೇಶ ನೀಡಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರ ಕೆಲಸವನ್ನು ಕೃಷಿ ತೋಟಗಾರಿಕೆಗೆ ಇಲಾಖೆ ನಿರ್ವಹಿಸುವಂತೆ ಆದೇಶಿಸಬೇಕು. ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಣೆ ಹಾಗೂ ಪ್ರೊಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡಬೇಕು. ಗ್ರಾಮದ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವ ವಿಚಾರದ ಸದರಿ ವೃಂದದ ನೌಕರರ ಬಹುವರ್ಷದ ಬೇಡಿಕೆಯನ್ನು ಅದ್ಯತೆಯಾಗಿ ಪರಿಗಣಿಸಿದಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net