ಕ್ಷಯ ಪ್ರಕರಣ ಶೂನ್ಯಕ್ಕೆ ತರಲು ಶ್ರಮಿಸಿ

Published on

ಬಳ್ಳಾರಿ: ಕ್ಷಯರೋಗ ಪ್ರಕರಣಗಳನ್ನು ಶೂನ್ಯಕ್ಕೆ ತಂದು, ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.

ನಗರದ ನೂತನ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಕ್ಷಯರೋಗ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ರೋಗ ಪತ್ತೆಹಚ್ಚಲು ನಗರದ ಬಿಮ್ಸ್, ಜಿಲ್ಲಾಸ್ಪತ್ರೆಗಳಲ್ಲಿ ಸಿಬಿನ್ಯಾಟ್ ಯಂತ್ರ ಹಾಗೂ ಟ್ರುನ್ಯಾಟ್ ಮಿಷನ್‌ಗಳಿದ್ದು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಅನುಷ್ಠಾನ ಮಾಡಲಾಗಿದೆ. ಇದರಿಂದ ಕ್ಷಯ ಪೀಡಿತರನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಕ್ಷಯರೋಗಕ್ಕೆ ಸಂಬಅಧಿಸಿದಂತೆ ಆಯುರ್ವೇದದಲ್ಲಿ ಚಿಕ್ಸಿತೆ ನೀಡಬೇಕು. ಇದಕ್ಕೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.

ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭಗೊಂಡು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net