ಬಳ್ಳಾರಿ : ಇಲ್ಲಿನ ತಾಲೂಕು ಕ್ರೀಡಾಂಗಣದ ಆವರಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಬಳಸಿದ ಕಬ್ಬಿಣವು ವಿದ್ಯಾರ್ಥಿ ತಲೆಗೆ ತಗುಲಿ ಗಾಯವಾದ ಘಟನೆ ಈಚೆಗೆ ನಡೆದಿದೆ.
ಐದನೇ ತರಗತಿ ವಿದ್ಯಾರ್ಥಿ ವೆಂಕಟೇಶ ಗಾಯಾಳು ಮೂಲತ ಮಾನ್ವಿ ತಾಲೂಕಿನನಾಗಿದ್ದು, ಬಿಸಿಎಂ ವಸತಿ ನಿಲಯದಲ್ಲಿ ಪ್ರವೇಶ ಪಡೆದು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಸದ್ಯ ವಿದ್ಯಾರ್ಥಿಗೆ ತಾಲೂಕಿನ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ್ದು ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
===