ವಿದ್ಯಾರ್ಥಿನಿ ನೇಹಾ ಹತ್ಯೆಗೆ ಆಕ್ರೋಶ

Neha Murdr opps Protest
ನೇಹಾ ಹತ್ಯೆ ಖಂಡಿಸಿ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಎಬಿವಿಪಿ ಹಾಗೂ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖಂಡರಾದ ಅನಿಲ್ ಕುಮಾರ್, ಮಹೇಶ್ವರ ಸ್ವಾಮಿ, ಅಡವಿ ಸ್ವಾಮಿ, ಶ್ರೀರಾಮುಲು, ಶ್ರೀನಿವಾಸ್ ಮೋತ್ಕಾರ ಇದ್ದರು.
Published on

ಬಳ್ಳಾರಿ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ನಗರದ ನಾರಾಯಣರಾವ್ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಎಬಿವಿಪಿ ಹಾಗೂ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನಾ ರ‌್ಯಾಲಿ ನಡೆಸಿ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿನಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ಒಳಪಡಿಸಬೇಕು. ಆರೋಪಿ ಫಯಾಜ್‌ನನ್ನು ನ್ಯಾಯಾಲಯ ಶೀಘ್ರ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಲವ್ ಜಿಹಾದ್ ಕುರಿತು ಒಂದು ಸಮಗ್ರ ತನಿಖೆ ನಡೆಸಿಲ್ಲ. ಹಿಂದು ಮಹಿಳೆಯರ ರಕ್ಷಣೆ ಬಗ್ಗೆ ನಿರ್ಲಕ್ಷೃ ತೋರಲಾಗುತ್ತಿದೆ. ಕೆಲ ವರ್ಷಗಳಲ್ಲಿ ರಾಜ್ಯದಲ್ಲಿ ಇಂತಹ ಹಲವು ಘಟನೆಗಳು ನಡೆದರೂ ಇದರ ಹಿಂದಿರುವ ಜಾಲವನ್ನು ಬೇಧಿಸಲು ರಾಜ್ಯ ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಭಟನಕಾರರು ಅಕ್ರೋಶ ಹೊರಹಾಕಿದರು.

ನೇಹಾ ಕುಟುಂಬದ ಜತೆ ನಾವಿದ್ದೇವೆ, ನೇಹಾ ನಮ್ಮೆಲ್ಲರ ಮನೆ ಮಗಳು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂಬ ನಾಮಫಲಕಗಳನ್ನು ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net