ಯೋಜನೆ ಸದುಪಯೋಗ ಪಡಿಸಿಕೊಳ್ಳಿ

Published on

ಕುಡಿಯುವ ನೀರಿನ ಯೋಜನೆಯಡಿ ಪಟ್ಟಣದ ಪ್ರತಿ ಮನೆ ಮನೆಗೂ ಸಂಪರ್ಕ ಕಲ್ಪಿಸುವ ಮೂಲಕ ಶುದ್ಧ ಕುಡಿಯುವ ನೀರು ದೊರೆಯಲಿದ್ದು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ನೀರು ಸರಬರಾಜು ಮಂಡಳಿ, ಒಳಚರಂಡಿ ಮಂಡಳಿ, ಪುರಸಭೆ ಕುರುಗೋಡು ಸಹಯೋಗದೊಂದಿಗೆ 70ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರದ 2.0 ಕುಡಿಯುವ ನೀರಿನ ಯೋಜನೆಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ತಾಲೂಕಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕುಡಿಯುವ ನೀರಿನ ಯೋಜನೆ ಯಶಸ್ವಿಯಾಗಿ ನಡೆಯಬೇಕು, ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರತಿ ಕ್ಷಣ ಕೆಲಸ ಮಾಡಲು ಶ್ರಮಿಸುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net