ಸರ್ಕಾರ ಮಣ್ಣೆರುಚುವ ಕೆಲಸ ಮಾಡುತ್ತಿದೆ

Published on

ಬಳ್ಳಾರಿ : ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೆ ಹೊಸ ಆಯೋಗ ರಚಿಸಿ ಮಾದಿಗ ಸಮಾಜಕ್ಕೆ ಮಣ್ಣೆರುಚುವ ಕೆಲಸ ಮಾಡುತ್ತಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್. ಹನುಮಂತಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಮಾದಿಗ ಸಮಾಜ ಒಳಮೀಸಲಾತಿಗಾಗಿ ಕಳೆದ ಮೂರು ದಶಕದಿಂದ ಹೋರಾಟ ನಡೆಸುತ್ತಿದೆ. ಮೀಸಲಾತಿ ವಂಚಿತರ ಕಣ್ಣೀರು ಒರೆಸುವ ಬದಲು ಹೈಕೋರ್ಟ್ ನಿ. ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಲು ಹೊರಟಿರುವುದು ನಾಚಿಗೇಡಿನ ಸಂಗತಿಯಾಗಿದೆ. ಆ.1ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರವೂ ರಾಜ್ಯದಲ್ಲಿ ನಿರಂತರ ಹೋರಾಟ ನಡೆದಿದೆ. ಹೊಸ ಆಯೋಗದಿಂದ ದೊಡ್ಡ ಹುನ್ನಾರವಿದೆ. ಕಾಲಹರಣ ಮಾಡಿ ಸಂತ್ರಸ್ತ ದಲಿತರನ್ನು ವಂಚಿಸುವ ಉದ್ದೇಶದಿಂದಲೇ ಆಯೋಗ ರಚಿಸುವ ನಾಟಕ ನಡೆಯುತ್ತಿದೆ. ಈ ಕ್ಯಾತೆ ತೆಗೆಯುವರ ಹಿಂದೆ ರಾಜಕೀಯ ಹಿತಾಸಕ್ತಿ ಅಡಗಿದೆ. ಡಾ.ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರೆ ನಾಯಕರ ತಾಳಕ್ಕೆ ಸಿಎಂ ಕುಣಿಯುತ್ತಿದ್ದಾರೆ. ಆದ್ದರಿಂದ, ರಾಜ್ಯದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರಮುಖರಾದ ರಾಜೇಶ, ಪ್ರಸಾದ್, ರಾಮಣ್ಣ, ತಿಪ್ಪೇಸ್ವಾಮಿ, ಅರುಣಾಚಲಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net