ಎರಡನೇ ದಿನವೂ ಮುಂದುವರೆದ ಮುಷ್ಕರ

Published on

ಬಳ್ಳಾರಿ ; ಸುಸ್ಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಎರಡನೇ ಹಂತದ ಮುಷ್ಕರವು ಮಂಗಳವಾರವೂ ನಡೆಯಿತು.

ಪೊಲೀಸ್ ಇಲಾಖೆಯಲ್ಲಿರುವಂತೆ ನೂರಾರು ಕೆಲಸಗಳನ್ನು ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನೊಳಗೊಂಡಂತೆ ಎಲ್ಲ ನೌಕರರಿಗೆ ಒಂದು ತಿಂಗಳ ಹೆಚ್ಚುವಾರಿ ವೇತನ ಜಾರಿಗೊಳಿಸಬೇಕು. ಪ್ರಯಾಣದ ಭತ್ಯೆ ದರವನ್ನು 500 ರೂ. ಯಿಂದ ಐದು ಸಾವಿರ ರೂ.ಗಳಿಗೆ ಹೆಚ್ಚುವರಿ ನೀಡಬೇಕು. ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಟತೆಯನ್ನಾಗಿ ಪರಿಗಣಿಸಬೇಕು. ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯನ್ನು ಮಾತ್ರ ನೀಡುವ ಜವಾಬ್ದಾರಿ ನಿರ್ವಹಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಪರಿಹಾರಿಸಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಪ್ರತಿಭಟನ ನಿರತ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರಕ್ಕೆ ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net