ಬಳ್ಳಾರಿ : ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅ.07 ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತದಿಂದ ಪ್ರಕಟಣೆಯಲ್ಲಿ ತಿಳಿಸಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 09 ಗಂಟೆಗೆ ನಗರದ ಎಸ್ಪಿ ವೃತ್ತದ ಬಳಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಹಾಗೂ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ.
===