ಬಳ್ಳಾರಿ : ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಫೆ.25 ರಂದು ಸಂಜೆ 04.30 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವ ಮೂಲಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಎಸ್.ಶ್ರೀನಿವಾಸಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.