ಬಳ್ಳಾರಿ : ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ನ.08 ರಂದು ಸಂಜೆ 04.30 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂದುಕೊರತೆಗಳಿರುವ ಸಾರ್ವಜನಿಕರು ಅರ್ಜಿ ಸಲ್ಲಿಸುವ ಮೂಲಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.