ಬಳ್ಳಾರಿ : ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಮೇ 27 ರಂದು ಸಂಜೆ 04 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಂದುಕೊರತೆಗಳಿರುವ ಸಾರ್ವಜನಿಕರು ಅರ್ಜಿ ಸಲ್ಲಿಸುವ ಮೂಲಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಸಾರ್ವಜನಿಕರು ಉಪಯೋಗ ಪಡೆದುಕೊಳ್ಳುವ ಮೂಲಕ ಬಾಕಿ ಇರುವ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಎಸ್.ಶ್ರೀನಿವಾಸಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.