ಕೈ ನಾಯಕರಿಗಾಗಿದೆ ಮತಿಭ್ರಮಣೆ; ಸಾರಿಗೆ ಸಚಿವ ಬಿ.ಶ್ರೀರಾಮುಲು ಕಟು ಟೀಕೆ

11082022 Sriramulu
Published on

ಬಳ್ಳಾರಿ: ಕಾಂಗ್ರೆಸ್ ನಾಯಕರಿಗೆ ಮತಿ ಭ್ರಮಣೆಯಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದರು. ಅಧಿಕಾರಕ್ಕೆ ಬರಲ್ಲ ಅಂತ ಅವರು ಏನೇನೋ ಟ್ವೀಟ್ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರ ಇವರಿಗೆ ಯಾಕೆ ಬೇಕು? ಸಿಎಂ ಬದಲಾವಣೆ ವಿಚಾರಕ್ಕೂ ಇವರಿಗೂ ಸಂಬಂಧವಿಲ್ಲ. ನಮ್ಮ ಪಕ್ಷದ ಸಿಎಂ ಬದಲಾವಣೆ ವಿಷಯ ಕಾಂಗ್ರೆಸ್‌ನವರಿಗೆ ಕನಸು ಬಿದ್ದಿತ್ತಾ? ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಸರ್ಕಾರ ನಡೆಯುತ್ತೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದರು.

ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ 4 ವರ್ಷಕ್ಕೊಮ್ಮೆ ನಡೆಯುತ್ತದೆ. ಅದೆಲ್ಲಾ ಪಕ್ಷದ ತೀರ್ಮಾನ. ನಾನು ಹೋರಾಟದಿಂದ ಬಂದವನು. ರಾಜಾಧ್ಯಕ್ಷ ಸ್ಥಾನವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನನಗೆ ರಾಜಾಧ್ಯಕ್ಷ ಜವಾಬ್ದಾರಿ ನೀಡಿದರೆ ವಹಿಸಿಕೊಳ್ಳುತ್ತೇನೆ ಎಂದರು.

2013ರಲ್ಲಿ ಸಿಎಂ ಅಭ್ಯರ್ಥಿಯಾಗಿದ್ದ ಜಿ.ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಸೋಲಿಸಿದ್ದರು. 2023ರಲ್ಲಿ ಸಿದ್ದರಾಮಯ್ಯ ಅವರನ್ನು ಶಿವಕುಮಾರ್ ಸೋಲಿಸಲಿದ್ದಾರೆ.| ಬಿ.ಶ್ರೀರಾಮುಲು ಸಾರಿಗೆ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net