ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಆರು ಟಿಎಂಸಿ ನೀರು; ನಾಲ್ಕು ತಾಲೂಕುಗಳಲ್ಲಿ ಪ್ರವಾಹ ಭೀತಿ

07082020 Bellari TB Dam
Published on

ಬಳ್ಳಾರಿ: ತುಂಗಭದ್ರಾ ಜಲಾಶಯ ಒಳಹರಿವು 81 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದರಿಂದಾಗಿ ಅಣೆಕಟ್ಟೆಗೆ ಒಂದೇ ದಿನ ಆರು ಟಿಎಂಸಿ ಅಡಿ ನೀರು ಹರಿದುಬಂದಿದೆ.\

ಗುರುವಾರ 17,858 ಕ್ಯೂಸೆಕ್ ಒಳಹರಿವಿದ್ದು, ಅಣೆಕಟ್ಟೆಯಲ್ಲಿ 40.262 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಜಲಾಶಯ 100.855 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಶುಕ್ರವಾರ 46.556 ಅಡಿ ಟಿಎಂಸಿ ನೀರು ಸಂಗ್ರಹವಾಗಿದೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಅಣೆಕಟ್ಟೆ ಒಳಹರಿವಿನ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಒಳಹರಿವು ಹೆಚ್ಚಳದಿಂದ ಜಿಲ್ಲೆಯ ಹರಪನಹಳ್ಳಿ, ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net