ಬಳ್ಳಾರಿ ; ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರ ಕ್ಲಿನಿಕ್‌ಗಳನ್ನು ಸೀಜ್ ಮಾಡಿದ ಘಟನೆ ಬುಧವಾರ ನಡೆದಿದೆ.
ಜಿಲ್ಲೆಯ ಮಹೇಶ್, ಮೆಹಬೂಬ್ ಬಂಧಿತರು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಡಿಸಿ ಸೂಚನೆ ಮೇರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ನೇತೃತ್ವದ ತಂಡವು ದಾಳಿ ನಡೆಸಿದೆ. ಗ್ರಾಮದಲ್ಲಿ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ ಪಿಯು ಪೂರ್ಣಗೊಳಿಸಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ.