ನಿಯಮಿತವಾಗಿ ತಪಾಸಣೆಗೆ ಒಳಪಡಿ

Published on

ಬಳ್ಳಾರಿ : ಗರ್ಭಕಂಠದ ಕ್ಯಾನ್ಸರ್ ಸುಲಭವಾಗಿ ಲಭ್ಯವಿರುವ ಸ್ಕಿಥನಿಂಗ್ ವಿಧಾನಗಳ ಮೂಲಕ ಆರಂಭದಲ್ಲಿ ಪತ್ತೆಹಚ್ಚಬಹುದಾಗಿದ್ದು, ಮಹಿಳೆಯರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.

ಇಲ್ಲಿನ ಬಿಡಿಎಎ ಸಭಾಂಗಣದಲ್ಲಿ ಬಯೋಸೈಫರ್ ಲ್ಯಾಬ್, ಮಹಾನಗರ ಪಾಲಿಕೆ, ಸಂಜೀವಿನಿ ಆಸ್ಪತ್ರೆ, ನವಕರ್ನಾಟಕ ಆಸ್ಪತ್ರೆ, ಸಿರಿ ಡಯಗ್ನೋಸ್ಟಿಕ್ ಲ್ಯಾಬ್ ಸಹಯೋಗದೊಂದಿಗೆ ಪಾಲಿಕೆಯ ಮಹಿಳಾ ಪೌರಕಾರ್ಮಿಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಚಿತ ನೋಂದಣಿ, ಅನುಭವಿ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಮತ್ತು ಉಚಿತ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯ ಡಾ.ಶಂಕರ್ ಮಾತನಾಡಿ, ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಗಳಿಂದ ಮಹಿಳೆಯರು ಸಾವನ್ನಪ್ಪಿದ ಪ್ರಕರಣಗಳು ಕಂಡುಬರುತ್ತಿವೆ. ಇದಕ್ಕಾಗಿ 10 ವರ್ಷದಿಂದ 45 ವರ್ಷದೊಳಗಿನ ಹೆಣ್ಣು ಮಕ್ಕಳು ತಪ್ಪದೇ ಪ್ರಾರಂಭಿಕ ಹಂತದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ದೃಢಪಟ್ಟಲ್ಲಿ ಎರಡು ಹಂತದ ಡೋಸ್ ಗಳಲ್ಲಿ ಗುಣಪಡಿಸಬಹುದಾಗಿದೆ ಎಂದು ಹೇಳಿದರು. ಬಳಿಕ ಕಾರ್ಯಕ್ರಮದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ತಪಾಸಣೆ ಕೈಗೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net