ವಿಮುಕ್ತ ದೇವದಾಸಿ ಮಹಿಳೆಯರಿಗೆ ಐದು ಸಾವಿರ ರೂ.ಪಿಂಚಣಿ ನೀಡಲು ಒತ್ತಾಯಿಸಿ ಪ್ರತಿಭಟನೆ

05032021 Bellary Devadasi womens protest
Published on

ಬಳ್ಳಾರಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗುರುಪ್ರಸಾದ್‌ಗೆ ಮನವಿ ಸಲ್ಲಿಸಿದರು.

ದೇವದಾಸಿ ಪುನರ್ವಸತಿ ಇಲಾಖೆಯ ಕೆಲ ಅಧಿಕಾರಿಗಳು ದೇವದಾಸಿ ಮಹಿಳೆಯರಿಗೆ ಸೌಲಭ್ಯಗಳನ್ನು ನೀಡದೆ ಸತ್ತಾಯಿಸುತ್ತಿದ್ದಾರೆ. ಇನ್ನೂ ಕೆಲವರು ಲಂಚ ಕೇಳುತ್ತಿದ್ದಾರೆ. ಅವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ವಿಮುಕ್ತ ದೇವದಾಸಿ ಮಹಿಳೆಯರಿಗೆ ಐದು ಸಾವಿರ ರೂ.ಪಿಂಚಣಿ ನೀಡಬೇಕು, ಬಾದನಹಟ್ಟಿ ಗ್ರಾಮದಲ್ಲಿ ಖಾಲಿ ಇರುವ ಸರ್ಕಾರಿ ಜಾಗವನ್ನು ಕೂಡಲೇ ಸರ್ವೇ ಮಾಡಿ ದೇವದಾಸಿ ಮಹಿಳೆಯರಿಗೆ ಹಂಚಬೇಕು ಹಾಗೂ ವಸತಿ ಭೂಮಿ ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net