

ಬಳ್ಳಾರಿ: ನೆರೆಹೊರೆಯವರನ್ನು ಪ್ರೀತಿಯಿಂದ ಕಾಣಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಸಿ.ಪಾಟೀಲ್ ಹೇಳಿದರು.
ಹಾನಗಲ್ ಕುಮಾರೇಶ್ವರ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಗುರುವಾರ ಪದವಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಮ್ಸ್ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಮಾತನಾಡಿ, ಕಲಿಕೆಗೆ ಭಾಷೆ ಮುಖ್ಯವಲ್ಲ. ಕಲಿಯುವ ಮನಸ್ಸು ಮುಖ್ಯ ಎಂದರು. ವೀವಿ ಸಂಘದ ಕಾರ್ಯದರ್ಶಿ ಬಿ.ವಿ.ಬಸವರಾಜ್ ಮಾತನಾಡಿ, ಗುರಿ ಮುಟ್ಟಲು ಸತತ ಪರಿಶ್ರಮ ಮತ್ತು ಪ್ರಾಮಾಣಿಕತೆ ಮುಖ್ಯ ಎಂದರು. ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಂ.ಕಿರಣ್‌ಕುಮಾರ್ ಮಾತನಾಡಿದರು. ಕಾಲೇಜಿನ ರವೀಂದ್ರ ಹಿರೆಮಠ, ಟಿ.ಎಂ. ವೀರಗಂಗಾಧರಸ್ವಾಮಿ ಇತರರಿದ್ದರು.