ವಿವೇಕಾನಂದರ ತತ್ವಾದರ್ಶಗಳು ಜೀವಂತ

Published on

ಬಳ್ಳಾರಿ : ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆಯಾಗಿದ್ದ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಜೀವಂತ ಎಂದು ಪ್ರಾಚಾರ್ಯ ರಾಮ್ ಕಿರಣ್ ಹೇಳಿದರು.

ಇಲ್ಲಿನ ಶ್ರೀಮೇಧಾ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಬಳ್ಳಾರಿ, ಚಿಗುರು ಕಲಾ ತಂಡ ಹಾಗೂ ಕಾಲೇಜು ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಜೀವನ ಚರಿತ್ರೆ ಮತ್ತು ಅವರ ಸಾಧನೆ ಬಗ್ಗೆ ಯುವ ಸಮುದಾಯ ಅರಿತುಕೊಳ್ಳಬೇಕು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ದಿವ್ಯವಾಣಿಯ ಜ್ಞಾನ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net