ಮಹಿಳಾ ಸಬಲೀಕರಣಕ್ಕಾಗಿ ಜಾಗೃತಿ ಜಾಥಾ

161122 Bellary Awareness march on women empowerment
ಬಳ್ಳಾರಿಯಲ್ಲಿ ಮಹಿಳಾ ಸಬಲೀಕರಣ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಾಲಿಕೆ ಮೇಯರ್ ಎಂ.ರಾಜೇಶ್ವರಿ ಚಾಲನೆ ನೀಡಿದರು.
Published on

ಬಳ್ಳಾರಿ: ಸಾರ್ವಜನಿಕ ಗ್ರಂಥಾಲಯಗಳ ಇಲಾಖೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ, ಕೋಲ್ಕತ್ತಾ ರಾಜಾರಾಮ್ ಮೋಹನರಾಯ್ ಗ್ರಂಥಾಲಯ ಆಶ್ರಯದಲ್ಲಿ ರಾಜಾರಾಮ್ ಮೋಹನರಾಯ್ 250ನೇ ಜನ್ಮ ವಾರ್ಷಿಕೋತ್ಸವ ನಿಮಿತ್ತ ಶಾಲಾ ವಿದ್ಯಾರ್ಥಿನಿಯರಿಂದ ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮ ಮಂಗಳವಾರ ಡಾ.ರಾಜ್‌ಕುಮಾರ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ ಚಾಲನೆ ನೀಡಿದರು. ಜಾಗೃತಿ ಜಾಥಾ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ರಾಘವೇಂದ್ರ ದೇವಸ್ಥಾನ ಮೂಲಕ ಎಂಜಿ ರಸ್ತೆ ಮಾರ್ಗವಾಗಿ ನಗರ ಕೇಂದ್ರ ಗ್ರಂಥಾಲಯಕ್ಕೆ ತಲುಪಿತು.

ಡಿವೈಎಸ್‌ಪಿ ಶೇಖರಪ್ಪ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಲೇಖಕಿ ಎ.ಎನ್.ಸಿದ್ದೇಶ್ವರಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಡಾ.ಬಿ.ಆರ್.ಗದಗಿನ್, ಕೆ.ಬಿ.ಸಿದ್ದಲಿಂಗಪ್ಪ, ಗಂಗಾಧರ್ ಪತ್ತಾರ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮೀ ಕಿರಣ್, ಮುಖ್ಯ ಗ್ರಂಥಾಲಯಾಧಿಕಾರಿ ನರಸಣ್ಣ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net