ಕೌಟುಂಬಿಕ ಕಲಹ ಯುವತಿ ಆತ್ಮಹತ್ಯೆ

Published on

ಬಳ್ಳಾರಿ : ಮನೆಯಲ್ಲಿನ ಕೌಟುಂಬಿಕ ಕಲಹಕ್ಕೆ ಮನನೊಂದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಇಲ್ಲಿನ ದೇವಿನಗರದ ನಿವಾಸಿ ಮಂಜುಳ (27) ಮೃತ. ನಗರದ ಬಿಮ್ಸ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ನರ್ಸ್‌ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಆಸ್ಪತ್ರೆ ಕೆಲಸ ಮುಗಿಸಿ ಸೋಮವಾರ ರಾತ್ರಿ ಊಟ ಮಾಡಿ ಕೋಣೆಯಲ್ಲಿ ಮಲಗಿದ್ದಳು. ಮಂಗಳವಾರ ಬೆಳಗ್ಗೆ ಎಂಟು ಗಂಟೆಯಾದರೂ ಹೊರಗಡೆ ಬಾರದ ಹಿನ್ನೆಲೆ ಮನೆಯವರು ಒಳಗಡೆ ನೋಡಿದ ವೇಳೆ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net