

ಮಸ್ಕಿ: ತಾಲೂಕಿನ ಬೆಳ್ಳಿಗನೂರು ಸರ್ಕಾರಿ ಶಾಲೆ ಕಟ್ಟಡ ಶಿಥಿಲಗೊಂಡಿದ್ದು, ಮಕ್ಕಳು ಭಯದಲ್ಲಿ ವಿದ್ಯೆ ಕಲಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 100ಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿದ್ದಾರೆ. ಮುಖ್ಯಶಿಕ್ಷಕ ಸೇರಿ ಒಟ್ಟು ನಾಲ್ವರು ಶಿಕ್ಷಕರಿದ್ದಾರೆ. ನಾಲ್ಕು ಶಾಲಾ ಕೊಠಡಿಗಳಿದ್ದು, ಅದರಲ್ಲಿ ಎರಡು ಕೊಠಡಿಗಳ ಮೇಲ್ಛಾವಣಿ ಕುಸಿತಗೊಂಡಿದೆ.
ಈ ಕುರಿತು ಹಲವು ಬಾರಿ ಶಿಕ್ಷಣ ಇಲಾಖೆಗೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಪಾಲಕರು ದೂರಿದ್ದಾರೆ. ಸರ್ಕಾರ ಹತ್ತು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ, ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ. ಕೂಡಲೇ, ಶಾಲಾ ಕೊಠಡಿಗಳ ದುರಸ್ತಿಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಶಿಕ್ಷಣ ಪ್ರೇಮಿರವಿಕುಮಾರಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಕೂಡಲೇ ರಿಪೇರಿ ಮಾಡಿಕೊಡಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಬಿಇಒ, ಸಿಂಧನೂರುಬಸವಲಿಂಗಪ್ಪಶಿಥಿಲಗೊಂಡಿರುವ ಕೊಠಡಿಗಳು ಸೇರಿ ಹಳೆಯ ಕಟ್ಟಡಗಳನ್ನು ಪಟ್ಟಿ ಮಾಡಿ ದುರಸ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಹಣ ಬಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.