ಬೆಳ್ಳೂರಿನಲ್ಲಿ ಕೊಡಗು ಡಿಸಿ, ಎಸ್ಪಿಗೆ ದಿಗ್ಬಂಧನ

IMG-20210318-WA0050
Published on

ಮಡಿಕೇರಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆ ವೇಳೆ ರೈತರಿಗೆ ಭರವಸೆ ನೀಡಿದ್ದಂತೆ ಬೆಳ್ಳೂರು ಪ್ರತಿಭಟನಾ ಸ್ಥಳಕ್ಕೆ ಗುರುವಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರೊಂದಿಗೆ ಭೇಟಿ ನೀಡಿದರು.

ಹುಲಿ ಕಾರ್ಯಾಚರಣೆ ಮತ್ತಷ್ಟು ಪರಿಣಾಮಕಾರಿ ನಡೆಯುವಂತೆ ಮಾಡಲು ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕಾರ್ಯಾಚರಣೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಪ್ರಸ್ತುತ ನಡೆಯುತ್ತಿರುವ ಕಾರ್ಯಾಚರಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಆದ್ದರಿಂದ ಹಾಲಿ ತಂಡವನ್ನು ಬದಲಾಯಿಸಿ, ಹೊಸ ತಂಡ ರಚಿಸಬೇಕೆಂದು ರೈತ ಸಂಘ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮನವಿ ಮಾಡಿದರು.

ತದನಂತರ ತಿತಿಮತಿಗೆ ತೆರಲು ಜಿಲ್ಲಾಧಿಕಾರಿ ಮುಂದಾದರು. ಎಸ್ಪಿಯೊಂದಿಗೆ ತಮ್ಮ ಕಾರಿಗೆ ತೆರಳಿದ್ದ ವೇಳೆ ಬೆಳ್ಳೂರು ಜಂಕ್ಷನ್ ನಲ್ಲಿ ಪ್ರತಿಭಟನಾರರು ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಹುಲಿ ಕಾರ್ಯಾಚರಣೆಗೆ ಸಂಬಂಧಿಸಿದ್ದಂತೆ ಜಿಲ್ಲಾಧಿಕಾರಿ ಮಾತುಗಳು ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು. ಅರ್ಧ ಗಂಟೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ರಸ್ತೆ ಮಧ್ಯದಲ್ಲಿದ್ದ ಕಾರಿನಲ್ಲಿ ಇರುವಂತಾಯಿತು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net