ಸಶಕ್ತ ಸಮಾಜ ನಿರ್ಮಾಣಕ್ಕೆ ಅಣಿ: ಶಾಸಕ ಹರೀಶ್ ಪೂಂಜ ಅಭಿಮತ

19
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಒಕ್ಕೂಟ ಬೆಳೆದು ಸಶಕ್ತ ಸಮಾಜ ನಿರ್ಮಾಣಕ್ಕೆ ಮಾತೃಶಕ್ತಿ ಅಣಿಯಾಗಲಿ. ಒಕ್ಕೂಟಕ್ಕೆ ಶಾಸಕರ ನಿಧಿಯಿಂದ 2.5 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬೆಳ್ತಂಗಡಿ ಐ.ಬಿ.ರಸ್ತೆ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಸಭಾಂಗಣದ ಶಿಲಾಫಲಕ ಅನಾವರಣಗೊಳಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಭಾಂಗಣ ಉದ್ಘಾಟಿಸಿದರು.ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ ಶುಭಹಾರೈಸಿದರು. ಒಕ್ಕೂಟ ಅಧ್ಯಕ್ಷೆ ಸವಿತಾ ಜಯದೇವ ಅಧ್ಯಕ್ಷತೆ ವಹಿಸಿದ್ದರು.

ಪಪಂ ಅಧ್ಯಕ್ಷ ಜಯಾನಂದ ಗೌಡ ಹಾಗೂ ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮಗಳ ಸಂಯೋಜಕಿ ಅಶ್ವಿನಿ, ವಕೀಲ ಮನೋಹರಕುಮಾರ್ ಇಳಂತಿಲ ಹಾಗೂ ಅನಿಲ್ ಕುಮಾರ್, ಉಪಾಧ್ಯಕ್ಷೆ ಉಮಾ ಆರ್.ರಾವ್, ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ, ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ಮೊದಲಾದವರಿದ್ದರು.

ಯಶೋದಾ , ಸಾಂತ್ವನ ಕೇಂದ್ರದ ಗಾಯತ್ರಿ ಹಾಗೂ ಶ್ವೇತಾ ಪ್ರಾರ್ಥಿಸಿದರು. ಸಂಚಾಲಕಿ ಲೋಕೇಶ್ವರಿ ವಿನಯಚ್ಚಂದ್ರ ಮಹಿಳಾ ಮಂಡಲದ ವರದಿ ವಾಚಿಸಿದರು. ಗೌರವಾಧ್ಯಕ್ಷೆ ಶಾಂತಾ ಬಂಗೇರ ಸ್ವಾಗತಿಸಿದರು. ಸಾಂತ್ವನ ಕೇಂದ್ರ ಆಪ್ತ ಸಮಾಲೋಚಕಿ ಸೌವ್ಯಾಶ್ರೀ ಗರ್ಡಾಡಿ ಮತ್ತ ಮಹೇಶ್ ಸಹಕರಿಸಿದರು. ಹೇಮಾವತಿ ಕೆ. ಬೆಳ್ತಂಗಡಿ ನಿರೂಪಿಸಿದರು. ಕಾರ್ಯದರ್ಶಿ ಆಶಾ ಸತೀಶ್ ವಂದಿಸಿದರು.

ಸನ್ಮಾನ, ಗೌರವಾರ್ಪಣೆ

ನಿವೃತ್ತ ಆರೋಗ್ಯಾಧಿಕಾರಿ ಭಾರತಿ ಪಿ.ವಿ. ಅವರನ್ನು ಸನ್ಮಾನಿಸಲಾಯಿತು. ಸಭಾಂಗಣ ನಿರ್ಮಾಣಕ್ಕೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net