ಈಶ್ವರಪ್ಪ-ಹಾಲಪ್ಪ ಅವರಿಗೂ ಬಿಜೆಪಿ ಟಿಕೆಟ್ ಸಿಗಲ್ಲ: ಕೆಪಿಸಿಸಿ ವಕ್ತಾರ ಬೇಳೂರು ಹೇಳಿಕೆ

belur gopalakrishna
Published on

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಶಾಸಕರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ ಅವರಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರು ಟಿಕೆಟ್ ನೀಡುವುದಿಲ್ಲ. ಕೆ.ಎಸ್.ಈಶ್ವರಪ್ಪ ಅವರಿಗೆ ಅವರ ಪಕ್ಷದವರೇ ಮಣ್ಣು ಮುಕ್ಕಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಿ ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಬರುವಂತೆ ನೋಡಿಕೊಂಡಿದೆ. ಈಶ್ವರಪ್ಪ ಅವರಿಗೆ ಸಂತೋಷ್ ಪಾಟೀಲ್ ಕುಟುಂಬದ ಶಾಪ ತಟ್ಟದೇ ಇರುವುದಿಲ್ಲ ಎಂದರು.

ಶನಿವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಕಣ್ಣೀರು ಹಾಕುತ್ತಾ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಬೇಸರದಿಂದಲೇ ಹೇಳಿದ್ದಾರೆ. ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ಬಿ.ಎಲ್.ಸಂತೋಷ್ ಮತ್ತಿತರರು ಯಡಿಯೂರಪ್ಪನವರಿಗೆ ಸಾಕಷ್ಟು ನೋವು ನೀಡಿದ್ದಾರೆ. ಬಿಜೆಪಿ ಪಾಲಿಗೆ ಬೀಷ್ಮನಂತಿರುವ ಅವರನ್ನು ಬೇಕೆಂದೇ ಮೂಲೆಗುಂಪು ಮಾಡುತ್ತಿರುವುದು ದುರಂತ ಎಂದು ಅಭಿಪ್ರಾಯಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net