

ಬೇಲೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಭಾಷಣ, ಪ್ರಬಂಧ ಸ್ಪರ್ಧೆ ಸೇರಿದಂತೆ ಇನ್ನಿತರ ಪಠ್ಯೇತರ ಚಟುವಟಿಕೆಗಳು ಸಹಕಾರಿ ಎಂದು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಜಿಲ್ಲಾಧ್ಯಕ್ಷೆ ಆಶಾ ಕಿರಣ್ ಹೇಳಿದರು.
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯಿಂದ ಪಟ್ಟಣದ ಶಾಂತಲಾ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಆಯೋಜಿಸಿದ್ದ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಶಾಂತಲಾ ವಿದ್ಯಾಸಂಸ್ಥೆ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಹರೀಶ್ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೂ ನಾವು ಆದ್ಯತೆ ನೀಡುತ್ತಿದ್ದೇವೆ ಎಂದರು. ಮುಖ್ಯ ಶಿಕ್ಷಕಿ ಆಶ್ವಿನಿ, ಕರ್ನಾಟಕ ಸ್ಪಂದನ ಸಿರಿ ವೇದಿಕೆ ತಾಲೂಕು ಅಧ್ಯಕ್ಷೆ ಪ್ರತಿಮಾ ಮಯ್ಯ, ಪದಾಧಿಕಾರಿಗಳಾದ ಮಮತಾ, ರಂಜನಿ, ಗೀತಾ, ಸುಧಾ, ಶ್ರೀನಿವಾಸ್, ಗುರುಮೂರ್ತಿ ಇತರರಿದ್ದರು.