

ಬೇಲೂರು: ಶಾಲಾ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಹಾಸನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಅರೇಹಳ್ಳಿ ರೋಟರಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಅರೇಹಳ್ಳಿ ರೋಟರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಯೋಗಿತ್.ಪಿ.ಶೆಟ್ಟಿ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ, ಲಘು ಸಂಗೀತದಲ್ಲಿ ತೃತೀಯ ಸ್ಥಾನ, ಎಸ್.ತೇಜಸ್ ಮಿಮಿಕ್ರಿಯಲ್ಲಿ ದ್ವಿತೀಯ, ವಿ.ಎಸ್.ರಾಘ ಅಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಸಮ್ರಾ ನಿಜಾಮ್ ಹಿಂದಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಬೇಲೂರಿಗೆ ಮತ್ತು ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.